ದುಬೈ, ಅಕ್ಟೋಬರ್ 25, 2021 (ಕರಾವಳಿ ಟೈಮ್ಸ್) : ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಬದ್ದ ಪ್ರತಿಸ್ಪರ್ಧಿ ಪಾಕಿಸ್ತಾನ ವಿರುದ್ದ 10 ವಿಕೆಟ್‍ಗಳ ಹೀನಾಯ ಸೋಲುಣ್ಣುವ ಮೂಲಕ ಕಳಪೆ ದಾಖಲೆಯೊಂದಕ್ಕೆ ಸಾಕ್ಷಿಯಾಗಿದೆ.
ಐಸಿಸಿ ವಿಶ್ವಕಪ್ ಇತಿಹಾಸದಲ್ಲಿಯೇ ಭಾರತ ತಂಡ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧ ಮಂಡಿಯೂರಿದೆ. ಅದೇ ರೀತಿ ಟಿ-20 ವಿಶ್ವಕಪ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಯಾವುದೇ ತಂಡವೊಂದರ ವಿರುದ್ಧ 10 ವಿಕೆಟ್ ಅಂತರದಲ್ಲಿ ಹೀನಾಯ ಸೋಲು ಕಂಡು ಕಳಪೆ ದಾಖಲೆ ಬರೆದಿದೆ.
ಈ ಹಿಂದೆ ಭಾರತ ತಂಡ 2012ರಲ್ಲಿ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಟೂರ್ನಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‍ಗಳ ಅಂತರದಲ್ಲಿ ಸೋಲುಂಡಿತ್ತು. ಇದು ಈ ವರೆಗಿನ ಭಾರತ ತಂಡದ ಹೀನಾಯ ದಾಖಲೆಯಾಗಿತ್ತು. ಇದೀಗ ಪಾಕಿಸ್ತಾನ ವಿರುದ್ದ 10 ವಿಕೆಟ್ ಸೋಲು ಕಾಣುವ ಮೂಲಕ ಮತ್ತೊಂದು ಕಳಪೆ ದಾಖಲೆಗೆ ಪಾತ್ರವಾಗಿದೆ.
0 comments:
Post a Comment