ಬಂಟ್ವಾಳ, ಅಕ್ಟೋಬರ್ 01, 2021 (ಕರಾವಳಿ ಟೈಮ್ಸ್) : ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ, ತೆಂಕಬೆಳ್ಳೂರು, ಬಡಗಬೆಳ್ಳೂರು, ಕುರಿಯಾಳ, ಅಮ್ಟಾಡಿ ಹಾಗೂ ಅರಳ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ, ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ಶನಿವಾರ (ನಾಳೆ) ಬೆಳಿಗ್ಗೆ 9.30ಕ್ಕೆ ಪಚ್ಚಿನಡ್ಕ-ತೊಡಂಬಿಲ ಚರ್ಚ್ ಹಾಲ್ ನಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಗಾಂಧಿ ಕಟ್ಟೆ ಉದ್ಘಾಟನೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಸುಮಾರು ಸಾವಿರ ಆರೋಗ್ಯ ಕಾರ್ಡ್ ವಿತರಣಾ ಗುರಿ ಹೊಂದಲಾಗಿದ್ದು, ನಾಗರಿಕರು ತಮ್ಮ ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಂಘಟಕರ ಪ್ರಕಟಣೆರ ತಿಳಿಸಿದೆ.
0 comments:
Post a Comment