ಕನ್ನಡಿಗರಿಗೆ ಉದ್ಯೋಗ ದೊರೆತಾಗ ಕರ್ನಾಟಕ, ಕನ್ನಡ ಅಭಿವೃದ್ದಿ ಸಾಧ್ಯ : ಸಿಎಂ ಬಸವರಾಜ ಬೊಮ್ಮಾಯಿ - Karavali Times ಕನ್ನಡಿಗರಿಗೆ ಉದ್ಯೋಗ ದೊರೆತಾಗ ಕರ್ನಾಟಕ, ಕನ್ನಡ ಅಭಿವೃದ್ದಿ ಸಾಧ್ಯ : ಸಿಎಂ ಬಸವರಾಜ ಬೊಮ್ಮಾಯಿ - Karavali Times

728x90

31 October 2021

ಕನ್ನಡಿಗರಿಗೆ ಉದ್ಯೋಗ ದೊರೆತಾಗ ಕರ್ನಾಟಕ, ಕನ್ನಡ ಅಭಿವೃದ್ದಿ ಸಾಧ್ಯ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ನವೆಂಬರ್ 01, 2021 (ಕರಾವಳಿ ಟೈಮ್ಸ್) : ಭಾಷೆ ಸುದೃಢವಾಗಿರುವಲ್ಲಿ ರಾಜ್ಯವೂ ಶಕ್ತಿಶಾಲಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಸಾರ್ವಜನಿಕ ಇಲಾಖೆಯು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದರು.

ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು. ಕನ್ನಡ ನಮ್ಮೆಲ್ಲರನ್ನೂ ಒಗ್ಗೂಡಿಸಿದೆ. ಕನ್ನಡ ನಮ್ಮ ದೇವರು. ಕನ್ನಡವೆಂಬ ತಾಯಿ ದೇವರನ್ನು ಸಂರಕ್ಷಿಸಬೇಕು. ಕನ್ನಡವನ್ನು ಬೃಹತ್ ಹೆಮ್ಮರವಾಗಿ ಬೆಳಸಬೇಕು. ಭಾಷೆ ಸದೃಢವಾಗಿದ್ದರೆ ಆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಭಾರತದಲ್ಲಿ ಅತ್ಯಂತ ಪುರಾತನವಾದ ಭಾಷೆ ಕನ್ನಡ. ಕನ್ನಡ ಸಿಂಧೂ ನಾಗರಿಕತೆಗೂ ಮೊದಲು ಬಳಕೆಯಲ್ಲಿದ್ದ ಭಾಷೆ. ಸಹಸ್ರಾರು ವರ್ಷಗಳಿಂದ ಬಳಕೆಯಲ್ಲಿರುವ ಕನ್ನಡದ ಶಕ್ತಿ ಕಸಿಯಲು ಸೂರ್ಯ, ಚಂದ್ರರು ಇರುವವರೆಗೂ ಅಸಾಧ್ಯ ಎಂದವರು ಹೇಳಿದರು.

ಕನ್ನಡ ಭಾಷೆಗೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನ ನೀಡಬೇಕು. ಕನ್ನಡವನ್ನು ಎಲ್ಲ ಆಯಾಮಗಳಲ್ಲೂ ಬಳಕೆಗೆ ತರುವ ಮೂಲಕ ಮತ್ತಷ್ಟು ಶಕ್ತಿ ತುಂಬಬೇಕಿದೆ. ಅದಕ್ಕೆ ಪೂರಕವಾಗಿ ತಾಂತ್ರಿಕ ಶಿಕ್ಷಣವನ್ನು ಕನ್ನಡದಲ್ಲಿ ಬೋಧಿಸುವ ಕೆಲಸವನ್ನು ಸರಕಾರ ಆರಂಭಿಸಿದೆ. ಈ ವಿಚಾರದಲ್ಲಿ ಗಟ್ಟಿಯಾದ ನಿಲುವನ್ನು ಸರಕಾರ ಹೊಂದಿದೆ ಎಂದರು.

ಕನ್ನಡದ ಮಕ್ಕಳಿಗೆ ಉದ್ಯೋಗದ ಭರವಸೆಯನ್ನು ನೀಡಬೇಕಿದೆ. ಆಗ ಮಾತ್ರ ಕನ್ನಡ, ಕನ್ನಡಿಗರ ಶಕ್ತಿ ಹೆಚ್ಚುತ್ತದೆ. ಅದಕ್ಕಾಗಿ ಕೈಗಾರಿಕಾ ತರಬೇತಿ ಕೇಂದ್ರಗಳು, ಪಾಲಿಟೆಕ್ನಿಕ್ ಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ರಾಜ್ಯದಲ್ಲಿ ಆರಂಭವಾಗುವ ಉದ್ದಿಮೆಗಳಲ್ಲಿ ಕೌಶಲ ವಲಯದ ಶೇಕಡ 75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದ ಸಿಎಂ ರಾಜ್ಯದ ಯಾವುದೇ ಪ್ರದೇಶ ಹಿಂದುಳಿಯಲು ಬಿಡುವುದಿಲ್ಲ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಯೋಜನೆ ರೂಪಿಸುತ್ತೇವೆ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದರು.

  • Blogger Comments
  • Facebook Comments

0 comments:

Post a Comment

Item Reviewed: ಕನ್ನಡಿಗರಿಗೆ ಉದ್ಯೋಗ ದೊರೆತಾಗ ಕರ್ನಾಟಕ, ಕನ್ನಡ ಅಭಿವೃದ್ದಿ ಸಾಧ್ಯ : ಸಿಎಂ ಬಸವರಾಜ ಬೊಮ್ಮಾಯಿ Rating: 5 Reviewed By: karavali Times
Scroll to Top