ಬಂಟ್ವಾಳ, ನವೆಂಬರ್ 20, 2021 (ಕರಾವಳಿ ಟೈಮ್ಸ್) : ನವೆಂಬರ್ 21 (ನಾಳೆ) ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ಮಿನಿ ವಿಧಾನಸೌಧದಲ್ಲಿ ಹಾಗೂ ವಿಟ್ಲ ಪಟ್ಟಣ ಪಂಚಾಯತಿನಲ್ಲಿ ತಲಾ ಒಂದರಂತೆ ಒಟ್ಟು 2 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಮಿನಿ ವಿಧಾನಸೌಧದಲ್ಲಿ 247 ಮತದಾರರು ಹಾಗೂ ವಿಟ್ಲ ಪಟ್ಟಣ ಪಂಚಾಯತಿನಲ್ಲಿ 168 ಮತದಾರರು ಮತ ಚಲಾಯಿಸಲಿದ್ದಾರೆ. ಮತದಾನ ಮುಗಿದ ಬಳಿಕ ಅದೇ ಕೇಂದ್ರದಲ್ಲಿ ಮತ ಎಣಿಕೆ ಮಾಡಿ ಅಭ್ಯರ್ಥಿಗಳು ಪಡೆದ ಮತಗಳ ಅಂಕಿ ಅಂಶಗಳನ್ನು ಜಿಲ್ಲಾ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment