ಬೆಂಗಳೂರು, ನವೆಂಬರ್ 14, 2021 (ಕರಾವಳಿ ಟೈಮ್ಸ್) : ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ನವೆಂಬರ್ 16ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಲ್ಲೋ ಎಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ ಸಹಿತ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ಕೊಡಗು, ಉತ್ತರ ಕನ್ನಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ತಮಿಳುನಾಡಿನ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವಾಯುಭಾರ ಕುಸಿತ ಇದೀಗ ದುರ್ಬಲಗೊಂಡಿದ್ದು, ಮೇಲ್ಮೈ ಸುಳಿಗಾಳಿ, ಆಂಧ್ರ ಪ್ರದೇಶ, ಒಡಿಶಾ ಮೂಲಕ ಪಶ್ಚಿಮ ಬಂಗಾಳದ ತನಕ ಹಾದು ಹೋಗಿರುವ ಟ್ರಫ್ ಹಾಗೂ ಆಗ್ನೇಯ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
0 comments:
Post a Comment