ಬಂಟ್ವಾಳ, ನವೆಂಬರ್ 17, 2021 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಮೆಲ್ಕಾರ್ ಜಂಕ್ಷನ್ನಿನಲ್ಲಿ ಮಂಗಳವಾರ ತಡ ರಾತ್ರಿ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ, ಮಂಗಳೂರು ನಿವಾಸಿ ಮಾರ್ನಬೈಲು ಸರ್ವಿಸ್ ಸ್ಟೇಶನ್ ನೌಕರ ಗಣೇಶ (37) ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಣೇಶ ಅವರು ಮೆಲ್ಕಾರ್ ಹೆದ್ದಾರಿಯಿಂದ ಉಳ್ಳಾಲ ರಸ್ತೆಗೆ ತಿರುವು ಪಡೆಯುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಬೈಕ್ ಸವಾರಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಚಾಲಕ ಶತ ಪ್ರಯತ್ನ ನಡೆಸಿದರೂ ಸಾಧ್ಯವಾಗದೆ ಲಾರಿ ಚಾಲಕನ ನಿಯಂತ್ರಣ ಮೀರಿ ಮೆಲ್ಕಾರ್ ವೃತ್ತಕ್ಕೂ ಡಿಕ್ಕಿ ಹೊಡೆದ ಪರಿಣಾಮ ವೃತ್ತ ಸಂಪೂರ್ಣ ಜಖಂಗೊಂಡಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment