ಬೆಂಗಳೂರು, ನವೆಂಬರ್ 30, 2021 (ಕರಾವಳಿ ಟೈಮ್ಸ್) : 2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದ್ದು, ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಅನ್‌ಲೈನ್ ಮೂಲಕವೇ ಸಲ್ಲಿಸತಕ್ಕದ್ದು.
ಅದೇ ರೀತಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎನ್.ಎಸ್.ಪಿ. ಪ್ರಿಮೆಟ್ರಿಕ್ (1 ರಿಂದ 10ನೇ ತರಗತಿ) ಪೋಸ್ಟ್ ಮೆಟ್ರಿಕ್ (ಪಿಯುಸಿಯಿಂದ ಡಿಗ್ರಿವರೆಗೆ) ಹಾಗೂ ಮೆರಿಟ್ ಕಂ ಮೀನ್ಸ್ (ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ) ಸ್ಕಾಲರ್ ಶಿಪ್ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವನ್ನು ಡಿಸೆಂಬರ್ 15ರವರೆಗೆ ವಿಸ್ತರಿಸಿ ಇಲಾಖೆ ಆದೇಶಿಸಿದೆ.
0 comments:
Post a Comment