ಬಂಟ್ವಾಳ, ನವೆಂಬರ್ 27, 2021 (ಕರಾವಳಿ ಟೈಮ್ಸ್) : ತಾಲೂಕಿನ ಬೆಂಜನಪದವು ನಿವಾಸಿ ಟೈಲರ್ ವೃತ್ತಿಯ ನಾರಾಯಣ ಮೂಲ್ಯ (62) ಅವರ ಮೃತದೇಹ ಶುಕ್ರವಾರ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಂಜನಪದವು ಸಮೀಪದ ಪೊಡಿಕ್ಕಳ ನಿವಾಸಿ ನಾರಾಯಣ ಮೂಲ್ಯ ಅವರು ನೆತ್ತರಕೆರೆಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು, ಇತ್ತೀಚೆಗೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ನವೆಂಬರ್ 25 ರಂದು ಬೆಳಿಗ್ಗೆ ಮನೆಯಿಂದ ಹೊರಟವರು ನಾಪತ್ತೆಯಾಗಿದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇೀಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆಗೆ ನೇತ್ರಾವತಿ ನದಿಯಲ್ಲಿ ಶವ ತೇಲಾಡುವ ಸ್ಥಿತಿಯಲ್ಲಿರುವುದನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸಂಬಂಧಿಕರು ಮೃತಹೇವನ್ನು ಗುರುತಿಸಿದ್ದರು. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment