ಬಂಟ್ವಾಳ, ನವೆಂಬರ್ 20, 2021 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ಸೇತುವೆ ಮೇಲಿಂದ ಹಾರಿದ ಮಹಿಳೆ ಕಾಣೆಯಾದಗಿದ್ದಾರೆ. ಶನಿವಾರ ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಮಹಿಳೆ ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಸಾರ್ವಜನಿಕರು ನೋಡಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ನಡೆಯುತ್ತಲೇ ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಮುಳುಗು ಬಲ್ಲ ಯುವಕರು ದೋಣಿಯೊಂದಿಗೆ ನದಿಯಲ್ಲಿ ಹುಡುಕಾಟ ಆರಂಭಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟರಲ್ಲಾಗಲೇ ಮಹಿಳೆ ನದಿ ನೀರಿನಲ್ಲಿ ಕಣ್ಮರೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ನದಿ ನೀರಿನಲ್ಲಿ ಕೊಚ್ಚ ಹೋದ ಮಹಿಳೆಯ ಬಗ್ಗೆ ಯಾವುದೇ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment