ಪುತ್ತೂರು, ನವೆಂಬರ್ 18, 2021 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಕ್ಕೆ ಹಾಜರಾಗದೆ ಕಳೆದ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕೋಲಂಬಾಡಿ-ತಾಯಲ್ ಮನೆ ನಿವಾಸಿ ಮೊಹಮ್ಮದ್ ರಫೀಕ್ ಎಂ ಎಂ (41) ಎಂಬಾತನನ್ನು ಪುತ್ತೂರು ಪೆÇಲೀಸರು ಬುಧವಾರ ಕೇರಳದಿಂದ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದು, ಮತ್ತೆ ನ್ಯಾಯಾಂಗ ಬಂಧನಕ್ಕೆ ತಳ್ಳಿದ್ದಾರೆ.
ಪುತ್ತೂರಿನಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ 2 ಲೀಟರ್ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 24/2006 ಕಲಂ 87, 71(ಎ) ಕೆ ಎಫ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ಪತ್ತೆ ಬಗ್ಗೆ ನ್ಯಾಯಾಲಯವು ಸಿಸಿ ನಂಬ್ರ 16/08 ಹಾಗೂ ಎಲ್ ಪಿ ಸಿ ನಂಬ್ರ 17/13 ರಂತೆ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಈ ಪ್ರಕಾರ ಕಾರ್ಯಪ್ರವೃತ್ತರಾದ ಪುತ್ತೂರು ಉಪವಿಭಾಗದ ಡಿವೈಎಸ್ಪಿ ಗಾನ ಪಿ ಕುಮಾರ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಉಮೇಶ್ ಉಪ್ಪಳಿಕೆ, ಪಿಎಸ್‍ಐ ಉದಯರ ವಿ ಎಂ ವೈ, ಅಮೀನಸಾಬ ಎಂ. ಅತ್ತಾರ, ಎಚ್.ಸಿ ಅದ್ರಾಮ, ಪ್ರವೀಣ್ ರೈ ಅವರು ಕೇರಳದ ಕಣ್ಣೂರಿನಿಂದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
0 comments:
Post a Comment