ಮಂಗಳೂರು, ನವೆಂಬರ್ 19, 2021 (ಕರಾವಳಿ ಟೈಮ್ಸ್) : ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳೂರಿನ ಶಕ್ತಿನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸುಮಾರು 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೃಷ್ಣಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಅಸಂಘಟಿತ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಅಸಂಘಟಿತ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ಪ್ರಶಾಂತ್ ಅಮೀನ್, ರಾಜೇಶ್ ಕದ್ರಿ, ಮೋಹನ್ ಗಣಪಯ್ಯ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment