ಬಂಟ್ವಾಳ, ಡಿಸೆಂಬರ್ 11, 2021 (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆಯ ವತಿಯಿಂದ ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 18 ರಂದು ಶನಿವಾರ ಮಗ್ರಿಬ್ ನಮಾಝ್ ಬಳಿಕ ಆಲಡ್ಕ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ವಠಾರದಲ್ಲಿ ನಡೆಯಲಿದೆ.
ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ ಅಧ್ಯಕ್ಷತೆ ವಹಿಸಲಿದ್ದು, ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಕ್ಲಸ್ಟರ್ ಅಧ್ಯಕ್ಷ ಅಬೂಸ್ವಾಲಿಹ್ ಫೈಝಿ ಉದ್ಘಾಟಿಸುವರು. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಅವರು ಮುಖ್ಯ ಭಾಷಣಗೈಯಲಿದ್ದಾರೆ.
ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ವಿಜೇತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
0 comments:
Post a Comment