ಬೆಂಗಳೂರು, ಡಿಸೆಂಬರ್ 09, 2021 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ಇಲಾಖೆಯ ಅಧೀನದಲ್ಲಿ ಬರುವ ಪ್ರಿಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಹೊಸ ಹಾಗೂ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಇದ್ದ ಶೇ 50 ಅಂಕ ಕಡ್ಡಾಯ ಮಾನದಂಡವನ್ನು ಇಲಾಖೆ ಸಡಿಲಿಸಿ ಅದೇಶ ನೀಡಿದ್ದು, 50 ಶೇಕಡಾಕ್ಕಿಂತ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳೂ ಕೂಡಾ ಅರ್ಜಿ ಸಲ್ಲಿಸಲು ಅರ್ಹರು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ. ಇದೇ ವೇಳೆ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ಹೊಸ ಅರ್ಜಿಗೆ 50% ಅಂಕ ಅಗತ್ಯ ಬೇಕಾಗಿದ್ದು, ನವೀಕರಣ ವಿದ್ಯಾರ್ಥಿಗಳಿಗೆ ಬೇಕಾಗಿಲ್ಲ ಎಂದು ಇದೇ ವೇಳೆ ಅಲ್ಪಸಂಖ್ಯಾತ ಇಲಾಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
9 December 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment