ಬಂಟ್ವಾಳ, ಡಿಸೆಂಬರ್ 24, 2021 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಸಮೀಪ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ (ಖ.ಸಿ) ಅವರ ಹೆಸರಿನಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ 2022 ರ ಮಾರ್ಚ್ 5 ರಿಂದ 12 ರವರೆಗೆ ನಡೆಯಲಿದೆ. ಸಯ್ಯಿದ್ ಹಮೀದಾಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ, ಸಯ್ಯಿದುಲ್ ಉಲಮಾ ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಳ್, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಭಾಗವಹಿಸಲಿದ್ದಾರೆ.
ಅಲ್ಲದೆ 7 ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು, ಖಾಸಿಂ ದಾರಿಮಿ ಕಿನ್ಯ, ಸಿರಾಜುದ್ದೀನ್ ಖಾಸಿಮಿ ಪತ್ತನಾಪುರ, ಇ ಪಿ ಅಬೂಬಕ್ಕರ್ ಮುಸ್ಲಿಯಾರ್, ವಲಿಯುದ್ದೀನ್ ಫೈಝಿ, ಕುಮ್ಮನಂ ನಿಝಾಮುದ್ದೀನ್ ಅಝ್ಹರಿ, ನವಾಝ್ ಮನ್ನಾನಿ, ಶಮೀರ್ ದಾರಿಮಿ ಕೊಲ್ಲಂ, ಸಿಂಸಾರುಲ್ ಹಕ್ ಹುದವಿ ಅಥವಾ ಅನ್ವರ್ ಮುಹಿಯುದ್ದೀನ್ ಹುದವಿ ಮೊದಲಾದ ಧಾರ್ಮಿಕ ಪಂಡಿತರ ಸಹಿತ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಸೀದಿ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.
0 comments:
Post a Comment