ನವದೆಹಲಿ, ಡಿಸೆಂಬರ್ 25, 2021 (ಕರಾವಳಿ ಟೈಮ್ಸ್) : 2022 ರ ಜನವರಿ 3 ರಿಂದ ದೇಶದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಶನಿವಾರ ರಾತ್ರಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು 15 ರಿಂದ 18 ವರ್ಷದ ಮಕ್ಕಳಿಗೆ ಜ 3 ರಿಂದ ಕೋವಿಡ್ ಲಸಿಕೆ ನೀಡಲು ಆರಂಭಿಸಲಾಗುವುದು ಎಂದಿದ್ದಾರೆ.
ಶಾಲಾ- ಕಾಲೇಜುಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದ ಪ್ರಧಾನಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು, 60 ವರ್ಷ ಮೇಲ್ಪಟ್ಟವರು ಹಾಗೂ ಕೋಮಾರ್ಬಿಡಿಟಿ ಇದ್ದವರಿಗೂ ವೈದ್ಯರ ಸಲಹೆ ಮೇರೆಗೆ ಪ್ರಿಕಾಷನ್ ಲಸಿಕೆ ಆರಂಭಿಸಲಾಗುವುದು ಎಂದರು. ದೇ
ದೇಶದಲ್ಲಿ 141 ಕೋಟಿ ಡೋಸ್ ಲಸಿಕೆ ಹಂಚಲಾಗಿದೆ. 18 ಲಕ್ಷ ಐಸೋಲೇಷನ್ ಬೆಡ್, 5 ಲಕ್ಷ ಅಮ್ಲಜನಕ ಬೆಂಬಲ ಬೆಡ್, 1.4 ಲಕ್ಷ ಐಸಿಯು ಬೆಡ್ ಹೊಂದಿದ್ದೇವೆ. ಅರ್ಹ ಜನಸಂಖ್ಯೆಯ ಶೇಕಡಾ 90ಕ್ಕಿಂತಲೂ ಹೆಚ್ಚು ಮಂದಿಗೆ ಮೊದಲ ಡೋಸ್ ನೀಡಲಾಗಿದೆ ಎಂದು ತಿಳಿಸಿದರು.
ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಭಯಪಡಬೇಡಿ ಆದರೆ ಜಾಗರೂಕರಾಗಿರಿ ಮತ್ತು ನಿಯಮಿತವಾಗಿ ಮಾಸ್ಕ್ ಬಳಸಿ ಮತ್ತು ಕೈಗಳನ್ನು ಸ್ಯಾನಿಟೈಜ್ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
0 comments:
Post a Comment