ಬಂಟ್ವಾಳ, ಡಿಸೆಂಬರ್ 19, 2021 (ಕರಾವಳಿ ಟೈಮ್ಸ್) : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದ. ಕ.-ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಕಾರ್ಯಕ್ರಮ ಉದ್ಘಾಟಿಸಿದರು. ಎಸ್.ಕೆ.ಪಿ.ಎ. ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಕಾಶ್ ಅಂಚನ್, ಭುವನೇಶ್ ಪಚ್ಚಿನಡ್ಕ, ಯಶವಂತ ದೇರಾಜೇಗುತ್ತು, ನೋಟರಿ-ನ್ಯಾಯವಾದಿ ಅರುಣ್ ರೋಶನ್ ಡಿ’ಸೋಜಾ, ನವೀನ್ ಕುದ್ರೋಳಿ, ವಾಸುದೇವ ರಾವ್, ಎಸ್.ಕೆ.ಪಿ.ಎ. ಜಿಲ್ಲಾ ಪ್ರದಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಉಪಾಧ್ಯಕ್ಷರುಗಳಾದ ಲೋಕೇಶ್ ಸುಬ್ರಹ್ಮಣ್ಯ, ಪದ್ಮಪ್ರಸಾದ್ ಜೈನ್ ಕಾರ್ಕಳ, ವಲಯದ ನೂತನ ಪ್ರಧಾನ ಕಾರ್ಯದರ್ಶಿ ರವಿಪ್ರಕಾಶ್ ಕಲ್ಪನೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳದ ಪ್ರತೀಕ್ ಮಲ್ಯ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಸಂಸ್ಥೆಯ ಸದಸ್ಯರ ಮಕ್ಕಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸದಸ್ಯರ ಮಕ್ಕಳನ್ನು ಅಭಿನಂದಿಸಲಾಯಿತು.
ಬಂಟ್ವಾಳ ವಲಯದ ನಿಯೋಜಿತ ಅಧ್ಯಕ್ಷ ಹರೀಶ್ ಕುಂದರ್ ಅವರಿಗೆ ಅಧ್ಯಕ್ಷ ಕುಮಾರಸ್ವಾಮಿ ಅಧಿಕಾರ ಹಸ್ತಾಂತರಿಸಿದರು.
ದಯಾನಂದ ಬಂಟ್ವಾಳ್ ಸ್ವಾಗತಿಸಿ, ಪ್ರಸ್ತಾವನೆಗೈದರು. ರೋಶನ್ ಮೊಗರ್ನಾಡ್ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment