ಬಂಟ್ವಾಳ, ಡಿಸೆಂಬರ್ 09, 2021 (ಕರಾವಳಿ ಟೈಮ್ಸ್) : ಈಗಾಗಲೇ ಅವಧಿ ಮುಕ್ತಾಯಗೊಂಡಿರುವ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣಾಧಿಕಾರಿಯಾಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ದಿನಾಂಕ ಪ್ರಕಟಿಸಿದ್ದು, ಗುರುವಾರದಿಂದಲೇ ಚುನಾವಣಾ ಅಧಿಸೂಚನೆ ಜಾರಿಗೆ ಬಂದಿದೆ.
ವಿಟ್ಲ ಪಟ್ಟಣ ಪಂಚಾಯತಿನ 18 ವಾರ್ಡ್ ಗಳಿಗೆ ಈ ಚುನಾವಣೆ ನಡೆಯಲಿದ್ದು, ಈಗಾಗಲೇ ವಾರ್ಡ್ ವಾರು ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ರಾಜಕೀಯ ಪಕ್ಷಗಳು ಉಮೇದುವಾರರ ಹುಡುಕಾಟ ಆರಂಭಿಸಿದೆ. ಡಿಸೆಂಬರ್ 15 ರಂದು ಬುಧವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಡಿ 16 ರಂದು ಗುರುವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಡಿ 18 ರಂದು ಶನಿವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 27 ರಂದು ಸೋಮವಾರ ಚುನಾವಣೆ ನಡೆಯಲಿದ್ದು, ಡಿ 30 ರಂದು ಗುರುವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಮರು ಮತದಾನ ಅಗತ್ಯ ಬಿದ್ದರೆ ಡಿ 29 ರಂದು ಬುಧವಾರ ನಡೆಸಲು ಸೂಚಿಸಲಾಗಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment