ಬಂಟ್ವಾಳ, ಡಿಸೆಂಬರ್ 24, 2021 (ಕರಾವಳಿ ಟೈಮ್ಸ್) : ಈಗಾಗಲೇ ಅವಧಿ ಮುಕ್ತಾಯಗೊಂಡಿರುವ ವಿಟ್ಲ ಪಟ್ಟಣ ಪಂಚಾಯತಿನ 18 ವಾರ್ಡ್‍ಗಳಿಗೆ ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಒಟ್ಟು 46 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 42 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2021ರ ಮತದಾರರ ಪಟ್ಟಿಯನ್ವಯ 7161 ಮಂದಿ ಪುರುಷ ಮತದಾರರು, 7554 ಮಂದಿ ಮಹಿಳಾ ಮತದಾರರು ಸೇರಿದಂತೆ 14,715 ಮಂದಿ ಮತದಾರರಿದ್ದು, 18 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಬಿ ಮೂಡ ಗ್ರಾಮದ ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಡಿ 26 ರಂದು ಮಸ್ಟರಿಂಗ್, ಡಿ 27 ರಂದು ಡಿ ಮಸ್ಟರಿಂಗ್ ಕಾರ್ಯ ನಡೆಯಲಿದ್ದು, ಡಿ 30 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಪಿಆರ್‍ಒ, ಎಪಿಆರ್‍ಒ ಹಾಗೂ ಪಿಒ ಸಹಿತ ಒಟ್ಟು 88 ಮಂದಿ ಮತಗಟ್ಟೆ ಅಧಿಕಾರಿಗಳನ್ನು ನಿಯೋೀಜಿಸಲಾಗಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment