ಬೆಂಗಳೂರು, ಜನವರಿ 02, 2022 (ಕರಾವಳಿ ಟೈಮ್ಸ್) : ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯಂತೆ ನಾಳೆಯಿಂದ (ಜ 3) ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಚಾಲನೆ ನೀಡಲಾಗುತ್ತಿದೆ. ಕೊರೋನಾ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರು ದಿನ ರಜೆ ನೀಡಲು ಸರಕಾರ ತೀರ್ಮಾನಿಸಿದೆ.
ಶಾಲೆಗಳಲ್ಲಿ ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಶಾಲಾ ಬಳಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಮಕ್ಕಳಿಗೆ ಲಸಿಕೆ ಹಾಕಿಸಲು ವಾಕ್ -ಇನ್ ನೋಂದಣಿ ಪಡೆಯಬಹುದು ಇಲ್ಲವೇ ಈಗಾಗಲೇ ಪ್ರಾರಂಭಿಸಲಾಗಿರುವ ಕೋ-ವಿನ್ ಆಪ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಆಧಾರ್ ಮತ್ತು ಇತರ ರಾಷ್ಟ್ರೀಯ ಗುರುತಿನ ಚೀಟಿಗಳಿಲ್ಲದ ಮಕ್ಕಳು ತಮ್ಮ ಶಾಲಾ ಗುರುತಿನ ಚೀಟಿಯನ್ನು ನೋಂದಣಿಗಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶಿಯ ಕೋವಾಕ್ಸಿನ್ ಲಸಿಕೆಯನ್ನು 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ನೀಡಲಾಗುವುದು, ಮೊದಲ ಡೋಸ್ ನೀಡಿದ 28 ದಿನಗಳ ಬಳಿಕ ಎರಡನೇ ಡೋಸ್ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.
0 comments:
Post a Comment