ಬಂಟ್ವಾಳ, ಜನವರಿ 11, 2022 (ಕರಾವಳಿ ಟೈಮ್ಸ್) : ಇಲ್ಲಿನ ರೈಲ್ವೇ ನಿಲ್ದಾಣದ ಮುಂಭಾಗದಲ್ಲೇ ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ಗುರುತು ಪರಿಚಯವನ್ನು ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆ ಹಚ್ಚಿದ್ದು, ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ನಿವಾಸಿ ಜಿನ್ನಪ್ಪ ನಾಯ್ಕ್ (70) ಎಂದು ಹೆಸರಿಸಲಾಗಿದೆ.
ಇವರು ಯಾವ ಕಾರಣಕ್ಕಾಗಿ ಈ ರೀತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲವಾದರೂ ಇವರು ಕಳೆದ ಕೆಲ ಸಮಯಗಳಿಂದ ವಿಪರೀತ ಮಂಡಿ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕಾಗಿ ಆತ್ಮಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.
0 comments:
Post a Comment