ಬಂಟ್ವಾಳ, ಜನವರಿ 02, 2022 (ಕರಾವಳಿ ಟೈಮ್ಸ್) : ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ, ಕೊಂಕಣಿ ಅಕಾಡೆಮಿ ಮಾಜಿ ಅಧ್ಯಕ್ಷ ಬಂಟ್ವಾಳದ ಬಸ್ತಿ ವಾಮನ್ ಮಾಧವ್ ಶೆಣೈ (87) ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದು, ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಳಿಗ್ಗೆ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಿದ ಬಳಿಕ ಮಧ್ಯಾಹ್ನದ ವೇಳೆಗೆ ಬಂಟ್ವಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಬಸ್ತಿ ವಾಮನ ಶೆಣೈ ಅವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ತೀವ್ರ ಸಂತಾಪ ಸೂಚಿಸಿದ್ದಾರೆ.
0 comments:
Post a Comment