ಬಂಟ್ವಾಳ, ಜನವರಿ 06, 2022 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಎನ್ ಸಿ ಸಿ ನೌಕಾದಳ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಸಂಸ್ಥೆಯ ಮಧುಕರ ಸಭಾಂಗಣದಲ್ಲಿ ನಡೆಯಿತು.
ಎನ್ ಸಿ ಸಿ ಘಟಕದ ತರಬೇತಿದಾರರಾದ ಅಮಿತ್ ಕುಮಾರ್ ಹಾಗೂ ಸಂತೋಷ್ ಕುಮಾರ್ ಕಾರ್ಯಾಗಾರ ನಡೆಸಿಕೊಟ್ಟರು. ಪ್ರೌಢಶಾಲೆಯ 75 ವಿದ್ಯಾರ್ಥಿಗಳು ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶಾಂಭವಿ ಮಾತಾಜಿ, ಶಾಲಾ ಎನ್ ಸಿ ಸಿ ಘಟಕದ ಪ್ರಮುಖ ಪುರುಷೋತ್ತಮ ಶ್ರೀಮಾನ್ ಉಪಸ್ಥಿತರಿದ್ದರು.
0 comments:
Post a Comment