ವೀಕೆಂಡ್ ಕಫ್ರ್ಯೂ ಮಾತ್ರ ರದ್ದು, ಉಳಿದಂತೆ ಎಲ್ಲ ಕೋವಿಡ್ ಶಿಷ್ಟಾಚಾರಗಳು ಯಥಾಸ್ಥಿತಿ : ಸರಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್ - Karavali Times ವೀಕೆಂಡ್ ಕಫ್ರ್ಯೂ ಮಾತ್ರ ರದ್ದು, ಉಳಿದಂತೆ ಎಲ್ಲ ಕೋವಿಡ್ ಶಿಷ್ಟಾಚಾರಗಳು ಯಥಾಸ್ಥಿತಿ : ಸರಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್ - Karavali Times

728x90

21 January 2022

ವೀಕೆಂಡ್ ಕಫ್ರ್ಯೂ ಮಾತ್ರ ರದ್ದು, ಉಳಿದಂತೆ ಎಲ್ಲ ಕೋವಿಡ್ ಶಿಷ್ಟಾಚಾರಗಳು ಯಥಾಸ್ಥಿತಿ : ಸರಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್

ಬೆಂಗಳೂರು, ಜನವರಿ 21, 2022 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ರಾಜ್ಯಾದ್ಯಂತ ಕಳೆದ ಎರಡು ವಾರಗಳಿಂದ ಹೇರಲಾಗಿದ್ದ ವಾರಾಂತ್ಯ ನಿಷೇಧಾಜ್ಞೆಯನ್ನು ವಾಪಾಸು ಪಡೆಯಲಾಗಿದ್ದು, ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಆಧರಿಸಿ ಮತ್ತೆ ವೀಕೆಂಡ್ ಕಫ್ರ್ಯೂ ಮುಂದುವರಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಉಳಿದಂತೆ ರಾತ್ರಿ ನಿಷೇಧಾಜ್ಞೆ ಸಹಿತ ಎಲ್ಲ ಕೋವಿಡ್ ಶಿಷ್ಟಾಚಾರಗಳು ಯಥಾಸ್ಥಿತಿ ಮುಂದುವರಿಯಲಿದೆ ಎಂದು ಸರಕಾರ ಪ್ರಕಟಿಸಿದೆ. 

ವಾರದ ಎಲ್ಲಾ ದಿನಗಳಲ್ಲೂ ರಾತ್ರಿ ಕರ್ಫ್ಯೂ ಅವಧಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ, ರಾಜ್ಯಾದ್ಯಂತ ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್ ಗಳಲ್ಲಿ 50 ಶೇಕರಾ ಆಸನ ಸಾಮರ್ಥ್ಯಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇಂತಹ ಸ್ಥಳಗಳಿಗೆ ಪ್ರವೇಶ ಪಡೆಯುವವರಿಗೆ ಎರಡೂ ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ. 

ರಾಜ್ಯಾದ್ಯಂತ ರ್ಯಾಲಿ, ಪ್ರತಿಭಟನಾ ಧರಣಿಗಳ ಸಹಿತ ಸಾಮಾಜಿಕ, ಧಾರ್ಮಿಕ, ರಾಜಕೀಯ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ, ಮದುವೆ ಸಮಾರಂಭಗಳಿಗೂ ಸರಕಾರ ಅವಕಾಶ ನೀಡಿದ್ದು, ಆದರೆ ತೆರೆದ ಸ್ಥಳಗಳಲ್ಲಿ ನಡೆಯುವ ಮದುವೆ ಕಾರ್ಯಕ್ರಮಗಳಲ್ಲಿ 200 ಮಂದಿ ಹಾಗೂ ಒಳಾಂಗಣ ಮದುವೆ ಕಾರ್ಯಕ್ರಮಗಳಲ್ಲಿ ಕೇವಲ 100 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 

ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಸೇರಿದಂತೆ ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ನಿಯಮ ಮೀರಿದವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರಕಾರ ಬಿಡುಗಡೆಗೊಳಿಸಿರುವ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವೀಕೆಂಡ್ ಕಫ್ರ್ಯೂ ಮಾತ್ರ ರದ್ದು, ಉಳಿದಂತೆ ಎಲ್ಲ ಕೋವಿಡ್ ಶಿಷ್ಟಾಚಾರಗಳು ಯಥಾಸ್ಥಿತಿ : ಸರಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್ Rating: 5 Reviewed By: karavali Times
Scroll to Top