ಬಂಟ್ವಾಳ, ಜನವರಿ 27, 2022 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಹಳೆ ನೇತ್ರಾವತಿ ಸೇತುವೆ ಅಡಿ ಭಾಗದ ನದಿ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ.
ನದಿ ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿದ ಸ್ಥಳೀಯ ಈಜುಗಾರ ಯುವಕರು ನಾಡ ದೋಣಿ ಮೂಲಕ ನದಿಗಿಳಿದು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿ ಆಂದಾಜು 35 ವರ್ಷದ ವ್ಯಕ್ತಿಯಾಗಿದ್ದು, ಗುರುತು ಪರಿಚಯ ಗೊತ್ತಾಗಿಲ್ಲ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
0 comments:
Post a Comment