ಕೋವಿಡ್ ನಿರ್ಬಂಧ ವೇಳೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರಕಾರದಿಂದ ಅನುಮತಿ - Karavali Times ಕೋವಿಡ್ ನಿರ್ಬಂಧ ವೇಳೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರಕಾರದಿಂದ ಅನುಮತಿ - Karavali Times

728x90

6 January 2022

ಕೋವಿಡ್ ನಿರ್ಬಂಧ ವೇಳೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರಕಾರದಿಂದ ಅನುಮತಿ

ಬೆಂಗಳೂರು, ಜನವರಿ 07, 2022 (ಕರಾವಳಿ ಟೈಮ್ಸ್) : ಸಾಂಕ್ರಾಮಿಕ ವೈರಸ್ ಹಿನ್ನಲೆಯಲ್ಲಿ ರಾಜ್ಯದಲ್ಲಿ 2 ವಾರ ನಿರ್ಬಂಧ ವಿಧಿಸಲಾಗಿದ್ದು, ಬೆಂಗಳೂರು ನಗರಕ್ಕೆ ಸೀಮಿತಗೊಂಡಂತೆ 1 ರಿಂದ 9ನೇ ತರಗತಿಯವರೆಗೆ ಶಾಲೆಗಳು ಮತ್ತು ಡಿಗ್ರಿ ಕಾಲೇಜುಗಳನ್ನು ಸದ್ಯಕ್ಕೆ ಮುಚ್ಚಲಾಗಿದೆ. ಈ ಮಧ್ಯೆ ಕೆಲವು ವೃತ್ತಿಪರ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರಕಾರ ಅನುಮತಿ ನೀಡಿದ್ದು ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಕಾಲೇಜುಗಳು ಕೋವಿಡ್-19 ಶಿಷ್ಠಾಚಾರಗಳ ಮಧ್ಯೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಕಾಲೇಜು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕೋವಿಡ್-19 ಶಿಷ್ಠಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕೋವಿಡ್ ನಿರ್ಬಂಧ ವೇಳೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರಕಾರದಿಂದ ಅನುಮತಿ Rating: 5 Reviewed By: karavali Times
Scroll to Top