ಬಂಟ್ವಾಳ, ಜನವರಿ 18, 2022 (ಕರಾವಳಿ ಟೈಮ್ಸ್) : ತಾಲೂಕಿನ ನರಿಕೊಂಬು ಗ್ರಾಮದ ಬರ್ಸಗುರಿ ನಿವಾಸಿ ನಾರಾಯಣ ಅವರ ಪುತ್ರ ಯತೀಶನನ್ನು ತನ್ನ ನೆರೆ ಮನೆಯ ನಿವಾಸಿ ಶಶಿಧರ ಎಂಬಾತ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಮಂಗಳೂರಿನ ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ನೀರಿಗೆ ದೂಡಿಹಾಕಿ ಕೊಲೆ ಮಾಡಿದ್ದು ಶವ ಮಂಗಳೂರಿನ ದಕ್ಕೆ ಪ್ರದೇಶದಲ್ಲಿ ಪತ್ತೆಯಾಗಿತ್ತು.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 197/2018 ಕಲಂ 364, 201, 302 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸಪ್ಪ ಬಾಲಪ್ಪ ಜಕಾರ್ತಿ ಅವರು ಪ್ರಕರಣದಲ್ಲಿ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಆರೋಪಿಯನ್ನು ದೋಷ ಮುಕ್ತಗೊಳಿಸಿ ಆದೇಶಿಸಿದ್ದಾರೆ. ಆರೋಪಿತನ ಪರವಾಗಿ ಬಿ ಸಿ ರೋಡಿನ ನೋಟರಿ-ನ್ಯಾಯವಾದಿ ಸುರೇಶ್ ಪೂಜಾರಿ ಹಾಗೂ ಅಂಜನಿ ಕಿಶೋರ್ ವಾದಿಸಿದ್ದರು.
0 comments:
Post a Comment