ಬಂಟ್ವಾಳ, ಜನವರಿ 24, 2022 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಮಾಯತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜನವರಿ 29 ರಂದು ಶನಿವಾರ ಸಂಜೆ 5 ಗಂಟೆಗೆ ನೆರವೇರಲಿದೆ.
ಮಸೀದಿ ಅಧ್ಯಕ್ಷ ಮುಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಪ್ರಭಾಷಣಗಾರ ಹಾಫಿಳ್ ಸಿರಾಜುದ್ದೀನ್ ಅಲ್-ಖಾಸಿಮಿ ಪತ್ತನಾಪುರಂ, ಶೈಖುನಾ ಬಂಬ್ರಾಣ ಉಸ್ತಾದ್, ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು, ನಂದಾವರ ಮಸೀದಿ ಖತೀಬ್ ಕಾಸಿಂ ದಾರಿಮಿ, ಮದ್ರಸ ಮುಖ್ಯ ಶಿಕ್ಷಕ ಉಮರ್ ದಾರಿಮಿ ಪಟ್ಟೋರಿ ಮೊದಲಾದವರು ಭಾಗವಹಿಸಲಿದ್ದು, ಸಂಜೆ 7 ರಿಂದ 9 ಗಂಟೆವರೆಗೆ ಸಿರಾಜುದ್ದೀನ್ ಖಾಸಿಮಿ ಅವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ ಎಂದು ಮಸೀದಿ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.
0 comments:
Post a Comment