ಬಂಟ್ವಾಳ, ಜನವರಿ 10, 2022 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ರೈಲ್ವೆ ನಿಲ್ದಾಣದ ಸಮೀಪದಲ್ಲೇ ಸೋಮವಾರ ರಾತ್ರಿ ವ್ಯಕ್ತಿಯೋರ್ವರು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾತ್ರಿ ಸುಮಾರು 8 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದ್ದು, ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ವ್ಯಕ್ತಿಯ ಮುಂಡ ರುಂಡ ಬೇರ್ಪಟ್ಟಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ಬಗ್ಗೆ ಇನ್ನಷ್ಟೆ ಪರಿಚಯ ಗೊತ್ತಾಗಬೇಕಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment