ಬೆಂಗಳೂರು, ಜನವರಿ 20, 2022 (ಕರಾವಳಿ ಟೈಮ್ಸ್) : ಈ ಬಾರಿಯ ಅಂದರೆ 2021-22ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದ್ದು, ಫೆಬ್ರವರಿ 21 ರಿಂದ 26ರವರೆಗೆ ಪೂರ್ವಸಿದ್ಧತಾ ಪರೀಕ್ಷೆಗಳು ನಡೆಯಲಿವೆ ಎಂದಿದೆ.
ಫೆಬ್ರವರಿ 21ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು ಇಂಗ್ಲಿಷ್, ಸಂಸ್ಕೃತ ಪರೀಕ್ಷೆ ನಡೆಯಲಿದ್ದು, ಫೆಬ್ರವರಿ 22 ರಂದು ಕೋರ್ ಸಬ್ಜೆಕ್ಟ್ ಸಮಾಜಶಾಸ್ತ್ರ, ಫೆ. 23 ರಂದು ದ್ವೀತಿಯ ಭಾಷೆ ಕನ್ನಡ, ಇಂಗ್ಲಿಷ್, ಫೆ. 24 ರಂದು ಕೋರ್ ಸಬ್ಜೆಕ್ಟ್ ಗಣಿತ, ಫೆ 25 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್. ಅರೇಬಿಕ್, ಪರ್ಷಿಯನ್, ಉರ್ದು ಸಂಸ್ಕೃತ, ಕೊಂಕಣಿ, ತುಳು ಹಾಗೂ ಫೆಬ್ರವರಿ 26ರಂದು ಕೋರ್ ಸಬ್ಜೆಕ್ಟ್ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ಪರೀಕ್ಷಾ ಬೋರ್ಡ್ ಪ್ರಕಟಣೆ ತಿಳಿಸಿದೆ.
0 comments:
Post a Comment