ಬೆಂಗಳೂರು, ಜನವರಿ 07, 2022 (ಕರಾವಳಿ ಟೈಮ್ಸ್) : ವಾರಾಂತ್ಯ ನಿಷೇಧಾಜ್ಞೆ ಇಂದು (ಜ 7) ರಾತ್ರಿ 8 ಗಂಟೆಯಿಂದ ರಾಜ್ಯಾದ್ಯಂತ ಜಾರಿಯಾಗಲಿದ್ದು, ವೀಕೆಂಡ್ ಕಫ್ರ್ಯೂ ಹಿನ್ನೆಲೆಯಲ್ಲಿ ಜ 8 ರಂದು ಶನಿವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್ ಆಗಲಿದೆ. ಈಗಾಗಲೇ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿರುವ ಬೆಂಗಳೂರು ನಗರದಲ್ಲೂ ಕೂಡ ವಿನಾಯಿತಿ ಇರುವ 10, 11, 12ನೇ ತರಗತಿ ಮಕ್ಕಳಿಗೂ ಭೌತಿಕ ತರಗತಿಗಳು ಶನಿವಾರ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಕೋವಿಡ್ ವೈರಸ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ವಾರಾಂತ್ಯ ನಿಷೇಧಾಜ್ಞೆ ಜ 7 ರ ಶುಕ್ರವಾರ ರಾತ್ರಿ 8 ರಿಂದ ರಿಂದ ಸೋಮವಾರ ಬೆಳಗ್ಗೆ 5ಗಂಟೆವರೆಗೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಉಳಿದೆಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕ ಸಂಚಾರಕ್ಕೂ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳನ್ನೂ ತೆರೆಯದಂತೆ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಇಲಾಖೆಯ ಎಲ್ಲ ಜಿಲ್ಲಾ ಉಪ ನಿರ್ದೇಶಕರುಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
0 comments:
Post a Comment