ಬಂಟ್ವಾಳ, ಜನವರಿ 25, 2022 (ಕರಾವಳಿ ಟೈಮ್ಸ್) : ಕೇಂದ್ರ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಮಂಗಳವಾರ (ಜ 25) ಬಂಟ್ವಾಳ ತಾಲೂಕಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನವನ್ನು ಬಂಟ್ವಾಳ ಮಿನಿ ವಿಧಾನಸೌಧದ ಚುನಾವಣಾ ಶಾಖೆಯಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು, ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಹೊಸದಾಗಿ ಅರ್ಹ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಹಾಗೂ ಯುವ ಮತದಾರರನ್ನು ತಪ್ಪದೆ ಮತದಾನ ಮಾಡುವಂತೆ ಪ್ರೇರೇಪಿಸುವ ಉದ್ದೇಶ ಹೊಂದಲಾಗಿದೆ ಎಂದರು. ತಹಶೀಲ್ದಾರ್ ರಶ್ಮಿ ಎಸ್.ಆರ್ ಹೇಳಿದರು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಪಿ ಜ್ಞಾನೇಶ್ ಮಾತನಾಡಿ ಮತದಾನ ಮಾಡುವುದರಿಂದ ನಾವು ಬಲಿಷ್ಠವಾದ ಸರಕಾರ ರಚಿಸಿ ಉತ್ತಮ ರಾಷ್ಟ್ರ ನಿರ್ಮಾಣ ಮಾಡಬಹುದು ಎಂದರು.
ಈ ಸಂದರ್ಭ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರ ನಾಥ್ ಭಟ್ ಮಿತ್ತೂರು, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ, ಚುನಾವಣೆ ಶಾಖೆಯ ಸಿಬ್ಬಂದಿಗಳು, ಕಚೇರಿ ಸಿಬ್ಬಂದಿಗಳು, ಶಿಕ್ಷಕರು, ಬೂತ್ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ ಯುವ ಮತದಾರರಿಗೆ ಸಾಂಕೇತಿಕವಾಗಿ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು. ಚುನಾವಣೆ ಉಪತಹಸೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.
0 comments:
Post a Comment