ಬಂಟ್ವಾಳ, ಜನವರಿ 19, 2022 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು-ಕೈಕಂಬದ ಯಕ್ಷ ಮಿತ್ರರು ಇವರ ಆಶ್ರಯದಲ್ಲಿ 13ನೇ ವರ್ಷದ ಯಕ್ಷಗಾನ ಕಾರ್ಯಕ್ರಮ ಜನವರಿ 21ರಂದು ಶುಕ್ರವಾರ ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಬಿ ಸಿ ರೋಡಿನ ಹೋಟೆಲ್ ರಂಗೋಲಿ ಹೊರಾಂಗಣದ ರಂಗ ಮಂಟಪದಲ್ಲಿ ಶ್ರೀ ಕೋದಂಡರಾಮ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರು “ಶುಕ್ರ ನಂದನೆ” ಎಂಬ ಪೌರಾಣಿಕ ಕಥಾ ಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿ ತೋರಿಸಲಿರುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ ಶೆಟ್ಟಿ ಭಾಗವಹಿಸಲಿದ್ದು, ಇದೇ ವೇಳೆ ಯಕ್ಷಗಾನ ಕಲಾವಿದ ಸದಾಶಿವ ಕುಲಾಲ್ ವೇಣೂರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಬಂಟ್ವಾಳ ಎಲ್ ಐ ಸಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ಅವರು ಸನ್ಮಾನ ನೆರವೇರಿಸಲಿದ್ದಾರೆ ಎಂದು ಕೈಕಂಬ ಯಕ್ಷ ಮಿತ್ರರು ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.
0 comments:
Post a Comment