ಮಂಗಳೂರು, ಫೆಬ್ರವರಿ 08, 2022 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಉಂಟಾಗಿರುವ ಕ್ಯಾಂಪಸ್ ಸಂಘರ್ಷಕ್ಕಾಗಿ ರಾಜ್ಯ ಸರಕಾರ ಈಗಾಗಲೇ ಹೈಸ್ಕೂಲ್-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವ ಪ್ರಕಾರ ಮಂಗಳೂರು ವಿವಿ ವ್ಯಾಪ್ತಿಗೆ ಒಳಗೊಂಡ ಎಲ್ಲಾ ಕಾಲೇಜುಗಳಿಗೆ ಫೆ 9 ರಿಂದ 11ರವರೆಗೆ ರಜೆ ಘೋಷಿಸಲಾಗಿದ್ದು, ಆನ್ ಲೈನ್ ತರಗತಿ ನಡೆಸಲು ಆದೇಶಿಸಲಾಗಿದೆ.
ರಾಜ್ಯದಲ್ಲಿ ಕ್ಯಾಂಪಸ್ ಆವರಣದಲ್ಲಿ ಉಂಟಾಗಿರುವ ಸಂಘರ್ಷ ವಾತಾವರಣ ತಿಳಿಯಾಗಿಸುವ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಕ್ರಮದ ಹಿನ್ನಲೆಯಲ್ಲಿ ಮಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ, ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಜಾ ಸಂದರ್ಭ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ವಿವಿ ಪ್ರಕಟಣೆ ಹೊರಡಿಸಿದೆ.
0 comments:
Post a Comment