ಬಂಟ್ವಾಳ, ಫೆಬ್ರವರಿ 07, 2022 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟೂರು ಗ್ರಾಮದ ಸುಬ್ಬಕೋಡಿಯಲ್ಲಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ (70) ಅವರು ರಿಕ್ಷಾದಿಂದ ಹೊರಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟಿದ್ದು, ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment