ಬಂಟ್ವಾಳ, ಫೆಬ್ರವರಿ 08, 2022 (ಕರಾವಳಿ ಟೈಮ್ಸ್) : ತಾಲೂಕಿನ ಮುಖ್ಯ ಪೇಟೆ ಬಿ ಸಿ ರೋಡಿನಲ್ಲಿ ಮಂಗಳವಾರ ಸಂಜೆ ಅಪರಿಚಿತ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಬೈಕ್ ಸವಾರ ಹಿಟ್ ಆಂಡ್ ರನ್ ಅಪಘಾತ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟಿದ್ದಾರೆ.
ಸಂಜೆ ಸುಮಾರು 5 ಗಂಟೆಯ ವೇಳೆಗೆ ಸುಮಾರು 52 ವರ್ಷ ಪ್ರಾಯದ ಮಹಿಳೆ ರಸ್ತೆ ದಾಟಲು ಬಿ ಸಿ ರೋಡು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂಭಾಗ ಹೆದ್ದಾರಿ ಬದಿ ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಬೈಕ್ ಸವಾರ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.
ಅಪಘಾತದ ತೀವ್ರತೆಗೆ ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ತಕ್ಷಣ ಸ್ಥಳೀಯರು ಅವರನ್ನು ಬಂಟ್ಚಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮಹಿಳೆಯ ಗುರುತು ಪರಿಚಯ ಸದ್ಯಕ್ಕೆ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment