ಬಂಟ್ವಾಳ, ಫೆಬ್ರವರಿ 18, 2022 (ಕರಾವಳಿ ಟೈಮ್ಸ್) : ಆಡಳಿತ ಯಂತ್ರವನು ಚುರುಕುಗೊಳಿಸುವ ಹಾಗೂ ಸಾರ್ವಜನಿಕರ ಕುಂದು-ಕೊರತೆಗಳನ್ನು ಸಕಾಲದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಬಾಕಿ ಇರುವ ಹಳೆ ಕಡತಗಳನ್ನು ವಿಲೇವಾರಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆ 19 ರಿಂದ 28ರವರೆಗೆ “ಕಡತ ವಿಲೇವಾರಿ ಸಪ್ತಾಹ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಾಳೆ (ಫೆ 19) ಶನಿವಾರ ಬೆಳಿಗ್ಗೆ 8.30ಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಯು ರಾಜೇಶ್ ನಾಯಕ್ ಅವರು ಬಿ ಸಿ ರೋಡಿನ ಮಿನಿ ವಿಧಾನಸೌಧ ಕೊಠಡಿ ಸಂಖ್ಯೆ 2 ರಲ್ಲಿ ಉದ್ಘಾಟಿಸಲಿದ್ದಾರೆ ಎಂದು ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
18 February 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment