ಬಂಟ್ವಾಳ, ಫೆಬ್ರವರಿ 26, 2022 (ಕರಾವಳಿ ಟೈಮ್ಸ್) : ಸಜಿಪಮುನ್ನೂರು ಗ್ರಾ ಪಂ ಮಾಜಿ ಅಧ್ಯಕ್ಷ, ಬಂಟ್ವಾಳ ತಾ ಪಂ ಮಾಜಿ ಸದಸ್ಯ, ಮಾರ್ನಬೈಲು ಕರಾವಳಿ ಫ್ರೆಂಡ್ಸ್ ಇದರ ಮಾಜಿ ಅಧ್ಯಕ್ಷ, ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ ಪುರುಷೋತ್ತಮ ಗಟ್ಟಿ (60) ಅವರು ಅನಾರೋಗ್ಯದಿಂದ ಶುಕ್ರವಾರ (ಫೆ 25) ತಡ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ರಾಜಕೀಯವಾಗಿ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ಗಮನಾರ್ಹ ಕೆಲಸ ಮಾಡಿದ್ದ ಇವರು ಸಮಾಜದ ಬಡ-ಬಗ್ಗರ, ದೀನ ದಲಿತರ ಸೇವೆಯಲ್ಲೂ ಮುಂಚೂಣಿಯಲ್ಲಿದ್ದರು. ಗ್ರಾ ಪಂ ಕಚೇರಿಗೆ ಜಮೀನು ಒದಗಿಸುವ ನಿಟ್ಟಿನಲ್ಲಿಯೂ ಇವರ ಪ್ರಯತ್ನ ಗಮನಾರ್ಹವಾಗಿತ್ತು.
ಮೃತರು ತಾಯಿ, ಪತ್ನಿ, ಇಬ್ಬರು ಸಹೋದರರು, ಮೂರು ಮಂದಿ ಸಹೋದರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ
ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ, ಸಜಿಪ ಮುನ್ನೂರು ಗ್ರಾ ಪಂ ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ ಸಹಿತ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಜಿಪಮುನ್ನೂರು ಮಂಡಲ ಉಪಪ್ರಧಾನರಾಗುವ ಮೂಲಕ ರಾಜಕೀಯ ನಂಟುಹೊಂದಿ ಆ ಬಳಿಕ ಹಲವು ಹುದ್ದೆಗಳನ್ನು ಅಲಂಕರಿಸಿ ಸಮಾಜದ ಏಳಿಗೆಗೆ ಶ್ರಮಿಸಿದ್ದ ಪುರುಷೋತ್ತಮ ಗಟ್ಟಿ ಅವರ ಅಗಲಿಕೆ ಸಮಾಜದ ಎಲ್ಲ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
0 comments:
Post a Comment