ಬಂಟ್ವಾಳ, ಫೆಬ್ರವರಿ 12, 2022 (ಕರಾವಳಿ ಟೈಮ್ಸ್) : ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ಬಂಟ್ವಾಳ ಹಾಗೂ ಪುತ್ತೂರು ಶಾಖಾ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಕಾನೂನು ತರಬೇತಿ ಕಾರ್ಯಕ್ರಮವು ಫೆಬ್ರವರಿ 14 ರಂದು ಸೋಮವಾರ ಬೆಳಿಗ್ಗೆ 9.30ಕ್ಕೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬಂಟ್ವಾಳ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಾಲಗೋಪಾಲಕೃಷ್ಣ, ಶ್ರೀಮತಿ ರಮ್ಯಾ, ಶ್ರೀಮತಿ ಶಿಲ್ಪಾ ಜಿ ತಿಮ್ಮಾಪುರ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಗಣೇಶಾನಂದ ಸೋಮಯಾಜಿ, ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಉಪಾಧ್ಯಕ್ಷ ಶರಶ್ಚಂದ್ರ ಭಟ್ ಕಾಕುಂಜೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ ಪಿ, ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ರಾಜ್ಯ ಕಾನೂನು ಮುಖ್ಯಸ್ಥ ಉಲ್ಲಾಸ್ ನಾಯಕ್, ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ರಾಜ್ಯ ಮುಖ್ಯಸ್ಥ ನಾಗರಾಜ್ ಬಿ, ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ರೀಜನಲ್ ಬ್ಯುಸಿನೆಸ್ ಮುಖ್ಯಸ್ಥ ಚೇತನ್ ಅರಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಬಂಟ್ವಾಳ ಶಾಖಾಧಿಕಾರಿ ಪುನೀತ್ ಕುಮಾರ್ ಹಾಗೂ ಪುತ್ತೂರು ಶಾಖಾಧಿಕಾರಿ ಜಯಪ್ರಕಾಶ್ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment