ಬಂಟ್ವಾಳ, ಫೆಬ್ರವರಿ 07, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಸಮೀಪದ ಗಡಿಯಾರದಲ್ಲಿ ಇಂಡಿಕಾ ಕಾರು ಚಾಲಕನ ನಿಯಂತ್ರಣ ಮೀರಿ ಹೆದ್ದಾರಿ ಬದಿಯಲ್ಲಿನ ಹೊಟೇಲಿಗೆ ನುಗ್ಗಿ ಬಳಿಕ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಗಡಿಯಾರದಲ್ಲಿ ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿಯಲ್ಲಿನ ಹೊಟೇಲ್ ಒಳಗೆ ನುಗ್ಗಿದೆ. ಅಪಘಾತದಿಂದ ಹೊಟೇಲ್ ಮಾಲಕ ರಿಯಾಝ್ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ 3 ಮಂದಿ ಹೊಟೇಲ್ ಸಿಬಂದಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
0 comments:
Post a Comment