ಮಂಗಳೂರು, ಮಾರ್ಚ್ 16, 2022 (ಕರಾವಳಿ ಟೈಮ್ಸ್) : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2020ರ ಜನವರಿ 20ರಂದು ಬಾಂಬ್ ಇಟ್ಟು ಆತಂಕ ಹಾಗೂ ಅಲ್ಲೋಲ ಕಲ್ಲೋಲ ಸೃಷ್ಟಿಸಿ ಹಾಕಿದ್ದ ಆರೋಪಿ ಆದಿತ್ಯ ರಾವ್ ಎಂಬಾತನನ್ನು ನ್ಯಾಯಾಲಯ ಬುಧವಾರ ದೋಷಿ ಎಂದು ತೀರ್ಪು ಪ್ರಕಟಿಸಿದ್ದು, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ನ್ಯಾಯಾಲಯ ಅಪರಾಧಿಗೆ ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4ರ ಅಡಿಯಲ್ಲಿ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂಪಾಯಿಗಳ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ರ ಸೆಕ್ಷನ್ 16ರಡಿಯಲ್ಲಿ, ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಲಾಗಿದೆ. ಇಲ್ಲೂ ದಂಡ ಪಾವತಿಸಲು ವಿಫಲವಾದರೆ ಮತ್ತೆ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ.
ಜೂನ್ 2020 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ 700 ಪುಟಗಳ ಚಾರ್ಜ್‍ಶೀಟ್‍ನಲ್ಲಿ, 36 ವರ್ಷದ ರಾವ್, ಎಫ್‍ಎಸ್‍ಪಿ ವರದಿಯ ಪ್ರಕಾರ ನಿಜವಾದ ಬಾಂಬ್ ಇದ್ದ ಚೀಲವನ್ನು ವಿಮಾನ ನಿಲ್ದಾಣದ ಪ್ರವೇಶದ್ವಾರದ ಬಳಿ ಇರಿಸಿದ್ದರು ಎಂದು ನಗರ ಪೆÇಲೀಸರು ಹೇಳಿದ್ದರು.
0 comments:
Post a Comment