ಬಂಟ್ವಾಳ, ಮಾರ್ಚ್ 14, 2022 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅರಳ ಗ್ರಾಮದ ಪೆÇರ್ಕಳ ಎಂಬಲ್ಲಿ ಕಳೆದ ಜನವರಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರಳ ಗ್ರಾಮದ ಶುಂಠಿಹಿತ್ಲು ನಿವಾಸಿ ಅಹಮ್ಮದ್ ಅವರ ಪುತ್ರ ಅಶ್ರಫ್ (42) ಎಂಬಾತನನ್ನು ತಾಲೂಕಿನ ಸೊರ್ನಾಡಿನಲ್ಲಿ ಸೋಮವಾರ ದಸ್ತಗಿರಿ ಮಾಡುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದಾರೆ.
ಅರಳ ಗ್ರಾಮದ ಪೆÇರ್ಕಳ ಮನೆ ಎಂಬಲ್ಲಿ ಕಳೆದ ಜನವರಿ 31 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಕಿಟಕಿಯಲ್ಲಿ ಇಟ್ಟಿದ್ದ ಕೀಯನ್ನು ಬಳಸಿಕೊಂಡು ಬಾಗಿಲು ತೆರೆದು ಒಳ ಪ್ರವೇಶಿಸಿ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿದ್ದ ಸುಮಾರು ಐದೂವರೆ ಪವನ್ ತೂಕದ ಚಿನ್ನದ ನೆಕ್ಲೇಸನ್ನು ಕಳವು ಮಾಡಲಾಗಿತ್ತು. ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 09/2022 ಕಲಂ 454, 380 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಪೆÇಲೀಸರು ಪ್ರಕರಣದ ಆರೋಪಿ ಸೋಮವಾರ ಪಂಜಿಕಲ್ಲು ಗ್ರಾಮದ ಸೊರ್ನಾಡುವಿನಲ್ಲಿರುವುದನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿ ಪೆÇಲೀಸರ ವಿಚಾರಣೆ ವೇಳೆ ಕಳವು ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಆರೋಪಿಯ ಮನೆಯಲ್ಲಿದ್ದ ಕಳವುಗೈದ ಸುಮಾರು 2 ಲಕ್ಷ ಮೌಲ್ಯದ ಚಿನ್ನದ ನೆಕ್ಲೇಸನ್ನು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪೆÇಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
0 comments:
Post a Comment