ಬಂಟ್ವಾಳ, ಮಾರ್ಚ್ 23, 2022 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕು ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ಕವಿತಾ ಎಸ್ ಅವರು ಇತ್ತೀಚೆಗೆ ಬೆಂಗಳೂರಿನ ಯಲಹಂಕಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗೌರವಿಸಿ ಬೀಳ್ಕೊಡಲಾಯಿತು.
ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಉಪತಹಶೀಲ್ದಾರರಾದ ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಸಂತೋಷ್, ಪ್ರಶಾಂತ್ ಶೆಟ್ಟಿ, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿ ಅನಿಲ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment