ಬೆಳ್ತಂಗಡಿ, ಮಾರ್ಚ್ 18, 2022 (ಕರಾವಳಿ ಟೈಮ್ಸ್) : ತಾಲೂಕಿನ ಪಡಂಗಡಿ ಗ್ರಾಮದ ಗರ್ಡಾಡಿ ನಂದಿಬೆಟ್ಟ ಬಳಿ ಬೈಕಿಗೆ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಹಿರೇಬಂಡಾರಿ ನಿವಾಸಿ ಸೋದರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿ, ನಿವೃತ ಶಿಕ್ಷಕ ದಿವಂಗತ ಅಬ್ದುರ್ರಝಾಕ್ ಮಾಸ್ಟರ್ ಅವರ ಪುತ್ರರಾದ ಹಮ್ಮಬ್ಬ ಸಿರಾಜ್ ಹಾಗೂ ಕುತುಬುದ್ದೀನ್ ಸಾದಿಕ್ ಎಂದು ಹೆಸರಿಸಲಾಗಿದೆ.
ಗುರುವಾರ ವೇಣೂರಿನಲ್ಲಿ ನಡೆದ ಸಹೋದರನ ಪುತ್ರನ ಮರಣಕ್ಕೆ ತೆರಳಿ ಬಳಿಕ ಅಲ್ಲಿಂದ ಶುಕ್ರವಾರ ಸಂಜೆ ಬೈಕಿನಲ್ಲಿ ವಾಪಾಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಭೀಕರ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಸಹೋದರರನ್ನು ತÀಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರಾದರೂ ಅದಾಗಲೇ ಇಬ್ಬರೂ ಕೂಡಾ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
0 comments:
Post a Comment