ಮುಂಬೈ, ಮಾರ್ಚ್ 06, 2022 (ಕರಾವಳಿ ಟೈಮ್ಸ್) : ಈ ಬಾರಿಯ ಅಂದರೆ 2022ನೇ ಸಾಲಿನ ಐಪಿಎಲ್ ಕ್ರೀಡಾಕೂಟ ಮಾರ್ಚ್ 26 ರಿಂದ ಆರಂಭಗೊಂಡು, ಮೇ 29 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಕೂಟದ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ಮುಂಬಯಿಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಮುಂಬೈ ಮತ್ತು ಪುಣೆಯಲ್ಲಿ ಒಟ್ಟು 70 ಲೀಗ್ ಮತ್ತು 4 ಪ್ಲೇ ಆಫ್ ಪಂದ್ಯಗಳು ನಡೆಯಲಿದೆ. ಒಟ್ಟು 65 ದಿನಗಳ ಕಾಲ ಟೂರ್ನಿ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ. ಮುಂಬೈ ನಗರದಲ್ಲಿರುವ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಒಟ್ಟು 20 ಲೀಗ್ ಪಂದ್ಯಗಳು ನಡೆಯಲಿದೆ.
ಪುಣೆಯ ಎಂಸಿಎ ಅಂತರಾಷ್ಟ್ರೀಯ ಸ್ಟೇಡಿಯಂ ಮತ್ತು ಬ್ರಬೋರ್ನ್ ಕ್ರೀಡಾಂಗಣದಲ್ಲಿ 15 ಪಂದ್ಯಗಳು ನಡೆಯಲಿದೆ. ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ವಾಂಖೆಡೆ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದ್ದು, ತಲಾ 3 ಪಂದ್ಯಗಳನ್ನು ಬ್ರಬೋರ್ನ್ ಮತ್ತು ಎಂಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಡಲಿದೆ.
ಮಾರ್ಚ್ 27 ರಂದು ಮೊದಲ ಡಬಲ್ ಹೆಡರ್ ಪಂದ್ಯ ಅಂದರೆ ಒಂದೇ ದಿನ ಎರಡು ಪಂದ್ಯ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಮತ್ತು ಮುಂಬೈ ತಂಡ ಸೆಣಸಾಡಲಿದೆ. ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡ ಆಡುವ ಮೂಲಕ ಆರ್ಸಿಬಿ ತನ್ನ ಅಭಿಯಾನ ಆರಂಭಿಸಲಿದೆ. 12 ಡಬಲ್ ಹೆಡರ್ ಪಂದ್ಯಾಟ ನಡೆಯಲಿದ್ದು, ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾದರೆ, ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಫೈನಲ್ ಪಂದ್ಯ ಮೇ 29 ರಂದು ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.
0 comments:
Post a Comment