ಪುತ್ತೂರು, ಮಾರ್ಚ್ 20, 2022 (ಕರಾವಳಿ ಟೈಮ್ಸ್) : ಕಬಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ 2020ರ ಫೆಬ್ರವರಿ 12 ರಂದು ಲ್ಯಾಪ್ ಟಾಪ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮಂಗಳೂರು ತಾಲೂಕು ಮಂಜನಾಡಿ ಗ್ರಾಮದ ಕಲ್ಕಟ್ಟ-ಬದ್ರಿಯಾ ನಗರ ನಿವಾಸಿ ಕೆ ಎಂ ಅಬ್ಬಾಸ್ ಅವರ ಪುತ್ರ ಅಬ್ದುಲ್ ಫಯಾನ್ (22) ಎಂಬಾತನನ್ನು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದುಕೊಂಡ ಪುತ್ತೂರು ನಗರ ಪೊಲೀಸರು ಕಳವಾಗಿರುವ ಲಾಪ್ ಟಾಪನ್ನು ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ.
ಕಬಕ ಹಿರಿಯ ಪ್ರಾಥಮಿಕ ಶಾಲೆಯಿಂದ 2020ರ ಫೆಬ್ರವರಿ 12 ರ ಸಂಜೆ 4.30 ರಿಂದ ಫೆಬ್ರವರಿ 13ರ ಬೆಳಗ್ಗೆ 8.30ರೊಳಗೆ 24,990/- ರೂಪಾಯಿ ಮೌಲ್ಯದ ಲ್ಯಾಪ್ ಟಾಪ್ ಕಳವಾಗಿರುವ ಬಗ್ಗೆ ಶಾಲಾ ಮುಖ್ಯ ಶಿಕ್ಷಕಿ ಸುಲೋಚನಾ ಕೆ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಅವಧಿಯಲ್ಲಿ ಶಾಲೆಯ ಎಲ್ಲಾ ಕೊಠಡಿಗಳಿಗೆ ಬೀಗ ಹಾಕಲಾಗಿದ್ದರೂ, ಬೀಗ ಮುರಿದು ಕಪಾಟಿನ ಬಾಗಿಲು ತೆರೆದು ಎಲ್ಲಾ ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ, ಅದೇ ಕೋಣೆಯ ಸೆಲ್ಫ್ ಮೇಲಿದ್ದ ಲೆನೋವಾ ಬ್ರಾಂಡಿನ ಲ್ಯಾಪ್ ಟಾಪ್ ಕಳವು ಮಾಡಿ ಹೋಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿತ್ತು. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 10/2020 ಕಲಂ 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣದ ಬೆನ್ನು ಬಿದ್ದ ಪೆÇಲೀಸರು ಮಂಗಳೂರು-ಕೊಣಾಜೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರ ಎಪ್ರಿಲ್ 12ರಂದು ದಸ್ತಗಿರಿಯಾಗಿದ್ದ ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ ಎಂಬವನನ್ನು ವಿಚಾರಿಸಿದಾಗ ತನ್ನ ಸ್ನೇಹಿತ ಸುಹೇಬ್ ಎಂಬಾತನೊಂದಿಗೆ ಸೇರಿ ಲ್ಯಾಪ್ ಟಾಪ್ ಕಳವು ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದ. ಅಲ್ಲದೆ, ಮಂಗಳೂರಿನ ಅಂಗಡಿಯೊಂದಕ್ಕೆ ಮಾರಾಟ ಮಾಡಿರುವುದಾಗಿ ಹೇಳಿಕೊಂಡಿದ್ದ.
ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯನ್ನು ಬಾಡಿ ವಾರೆಂಟ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಳಗಾಂ ಜಿಲ್ಲಾ ನ್ಯಾಯಾಲಯದಿಂದ ಮಾರ್ಚ್ 18ರಂದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. 5 ದಿನಗಳ ಕಾಲ ಪೆÇಲೀಸ್ ಭದ್ರತೆಯಲ್ಲಿ ಆತನನ್ನು ತನಿಖೆ ನಡೆಸಿ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲದೆ ಆತ ನೀಡಿದ ಹೇಳಿಕೆಯಂತೆ ಲ್ಯಾಪ್ ಟಾಪ್ ಮಾರಾಟ ಮಾಡಿದ ಅಂಗಡಿಗೆ ತೆರಳಿ ಶನಿವಾರ ಲ್ಯಾಪ್ ಟಾಪ್ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
0 comments:
Post a Comment