ಬಂಟ್ವಾಳ, ಮಾರ್ಚ್ 20, 2022 (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಶರೀಫ್ ಭೂಯಾ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಪಾಣೆಮಂಗಳೂರು ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಪಾಣೆಮಂಗಳೂರು ವಲಯ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶರೀಫ್ ಭೂಯಾ ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ವಿಶೇಷ ಶಿಫಾರಸ್ಸಿನ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪ್ರಧಾನ ಕಾರ್ಯದರ್ಶಿ ಗಿರೀಶ್ ಆಳ್ವ ಅವರ ಸೂಚನೆ ಮೇರೆಗೆ ಇದೀಗ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಳಿಸಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಅವರು ಶನಿವಾರ ಬಿ ಸಿ ರೋಡಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಶರೀಫ್ ಅವರಿಗೆ ನೇಮಕ ಆದೇಶ ಪತ್ರವನ್ನು ಶರೀಫ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮೆರಿಲ್ ರೇಗೋ, ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ, ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment