ಮಂಗಳೂರು, ಮಾರ್ಚ್ 28, 2022 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸೋಮವಾರ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ದಿನದ ಪರೀಕ್ಷೆಗೆ 350 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ 99 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರಥಮ ಭಾಷಾ ಪರೀಕ್ಷೆ ಬರೆದಿದ್ದಾರೆ.
ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ 28,611 ವಿದ್ಯಾರ್ಥಿಗಳು ಫ್ರೆಶರ್ಸ್ ಹಾಗೂ 29 ಮಂದಿ ರಿಪೀಟರ್ಸ್ ಸೇರದಿಂತೆ ಒಟ್ಟು 28,640 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 28,423 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 217 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಖಾಸಗಿ ಪರೀಕ್ಷಾ ಕೇಂದ್ರಗಳಲ್ಲಿ 878 ಮಂದಿ ಫ್ರೆಶರ್ಸ್ ಹಾಗೂ 24 ಮಂದಿ ರಿಪೀಟರ್ಸ್ ಸಹಿತ ಒಟ್ಟು 908 ಮಂದಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 769 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 133 ಮಂದಿ ಗೈರು ಹಾಜರಾಗಿದ್ದಾರೆ.
ಮಾರ್ಚ್ 30 ರಂದು ಬುಧವಾರ ದ್ವಿತೀಯ ಭಾಷಾ ಪರೀಕ್ಷೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ., ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಡಿಡಿಪಿಐ ಸುಧಾಕರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ನಗರದ ಕೆಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment