ಬಂಟ್ವಾಳ, ಮಾರ್ಚ್ 29, 2022 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್ ಅವರು ಬುಧವಾರ (ಮಾರ್ಚ್ 30) ಮಂಗಳೂರಿಗೆ ಭೇಟಿ ನೀಡಲಿದ್ದು, ನಗರದ ಬೆಂದೂರು ಸೈಂಟ್ ಸೆಬೆಸ್ಟಿಯನ್ ಹಾಲಿನಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಯುವ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರು ಜಿಲ್ಲೆಯಲ್ಲಿ ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಜಿಲ್ಲಾ, ಬ್ಲಾಕ್, ವಲಯ ಹಾಗೂ ಬೂತ್ ಮಟ್ಟದ ಎಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ಭೂಯಾ ಕರೆ ನೀಡಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜೊತೆಗೆ ಬಳಿಕದ ಎಲ್ಲಾ ಕಾರ್ಯಕ್ರಮಗಳಲ್ಲೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಜೊತೆಗಿದ್ದು ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದ್ದಾರೆ.
0 comments:
Post a Comment