ಬಂಟ್ವಾಳ, ಎಪ್ರಿಲ್ 12, 2022 (ಕರಾವಳಿ ಟೈಮ್ಸ್) : ತಾಲೂಕಿನ ಉಳಿ ಗ್ರಾ ಪಂ ಸಭಾಂಗಣದಲ್ಲಿ ಎಪ್ರಿಲ್ 16 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಾಲೂಕು ತಹಶೀಲ್ದಾರ್ ಅವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ದೊರೆಯಲಿದೆ.
ಉಳಿ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ಎಪ್ರಿಲ್ 13ರೊಳಗೆ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment