ಬಂಟ್ವಾಳ, ಎಪ್ರಿಲ್ 10, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಸಮೀಪದ ಬುಡೋಳಿಯಲ್ಲಿ ಎರಡು ಕಾರುಗಳು ನಡುವೆ ಅಪಘಾತ ನಡೆದು ಬೆಂಗಳೂರು ನಿವಾಸಿ ಲಕ್ಷ್ಮಣ ಆಚಾರಿ (65) ಅವರು ಮೃತಪಟ್ಟಿದ್ದು, ಕಾರು ಚಾಲಕ ಪ್ರಜ್ವಲ್ ಸಹಿತ ಇತರ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡುವ ನಿಟ್ಟಿನಲ್ಲಿ ಊರಿಗೆ ಬರುತ್ತಿರುವ ಸಂದರ್ಭ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
0 comments:
Post a Comment